ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಂದ ಪ್ರತಿಭಟನೆ

Published on: Wednesday, October 18th, 2017,9:32 am

ಆನೇಕಲ್:  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಡಿಐಜಿ ರೂಪ ವರದಿಯಿಂದ  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಲ್ಲವೂ ಕಟ್ಟುನಿಟ್ಟಿನಿಂದ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇದೇ ವೇಳೆ ತಮ್ಮನ್ನು ನೋಡಲು ಬರುವ ಸಂಬಂಧಿಕರಿಗೆ ಅವಕಾಶ ಕೊಡಬೇಕು, ಮನೆಯೂಟಕ್ಕೆ ಅವಕಾಶ ಕೊಡಬೇಕು ಎಂದು ಕೈದಿಗಳು ಧರಣಿ ನಡೆಸಿದ್ದಾರೆ.

ಡಿಐಜಿ ವರದಿಯ ಬಳಿಕ ಜೈಲಿನಲ್ಲಿ ಗಾಂಜಾ, ಬೀಡಿ, ಸಿಗರೇಟ್, ಅಫೀಮು ಯಾವುದು ಸಿಗುತ್ತಿರಲಿಲ್ಲ. ಹಾಗಾಗಿ ಅಂದೇ ಕೆಲ ಕೈದಿಗಳು ಇದರ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈಗ ಮತ್ತೆ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದು, ಕಾನೂನನ್ನು ಸಡಿಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Like us on facebook

Leave a Reply

Your email address will not be published. Required fields are marked *

*

code

LATEST NEWS