ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾಂಗ್ರೆಸ್ ನಿಂದ ಉಚ್ಚಾಟನೆ..ಇಲ್ಲಿದೆ ಕಾರಣ!

Published on: Saturday, October 14th, 2017,9:36 am

ಬೆಂಗಳೂರು : ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಆದೇಶ ಹೊರಡಿಸಿದ್ದಾರೆ.

ಎ.ಎಸ್.ಪಾಟೀಲ ನಡಹಳ್ಳಿ ಅವರು ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದರು ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ 2013ರ ಚುನಾವಣೆಗೆ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಜಯಶಾಲಿಯಾಗಿದ್ದರು. ಅಲ್ಲದೇ ಎ.ಎಸ್.ಪಾಟೀಲ ನಡಹಳ್ಳಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು.

Like us on facebook

Leave a Reply

Your email address will not be published. Required fields are marked *

*

code

LATEST NEWS