ಶೀಘ್ರದಲ್ಲೇ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಆರಂಭ

Published on: Friday, September 1st, 2017,10:30 am

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಮ್ಮ ಮಹಿಳಾ ಉದ್ಯೋಗಿಗಳಿಗಾಗಿ ಬೇಬಿ ಸಿಟ್ಟಿಂಗ್ ಆರಂಭಸಲಿದ್ದು, ಇದನ್ನು ಬಿಎಂಆರ್ ಸಿಎಲ್ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಖಚಿತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ್ದ ರಾಜ್ಯ ಮಹಿಳಾ ಆಯೋಗದ ಅಧ‍್ಯಕ್ಷೆ ಕುಮಾರಿ ನಾಗಲಕ್ಷ್ಮೀ ಬಾಯಿ ಪರಿಶೀಲನೆ ಬಳಿಕ ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಮಹಿಳಾ ಪ್ರಯಾಣಿಕರಿಗೆ ಅನಗತ್ಯವಾಗಿ ಆಗುವ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ಮಹಿಳಾ ಬೋಗಿಯೊಂದನ್ನು ಆರಂಭಿಸುವಂತೆ ಸೂಚಿಸಿದ್ದರು.

ಹಾಗಾಗಿ ಈ ಬಗ್ಗೆ ನಮ್ಮ ಮೆಟ್ರೋ ನಿರ್ದೇಶಕರಾದ ಪ್ರದೀಪ್ ಸಿಂಗ್ ಖರೋಲಾ ಖುದ್ದು ಮಹಿಳಾ ಆಯೋಗಕ್ಕೆ ಪತ್ರ ಬರೆದು ಖಚಿತಪಡಿಸಿದ್ದಾರೆ. ಒಟ್ಟಿನಲ್ಲಿ ನಮ್ಮ ಮೆಟ್ರೋ ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಮಹಿಳಾ ಉದ್ಯೋಗಿಗಳ ಸಹಾಯಕ್ಕೆ ಯೋಜನೆ ರೂಪಿಸಿದ್ದು, ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರವಾಗಿದೆ.

Like us on facebook

Leave a Reply

Your email address will not be published. Required fields are marked *

*

code

LATEST NEWS