ಸಿದ್ದರಾಮಯ್ಯ ಪುತ್ರನ ವಿರುದ್ಧ ಕಣಕ್ಕಿಳಿಯಲಿದ್ದಾರಾ ಶಂಕರ ಬಿದರಿ?

Published on: Thursday, October 12th, 2017,9:44 am

ಸ್ಪೇಷಲ್ ಡೆಸ್ಕ್: ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಿಂದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದ್ದು, ನಂಬಲರ್ಹ ಸುದ್ದಿ ಮೂಲಗಳು ಖಚಿತ ಪಡಿಸಿವೆ. ವರುಣದಿಂದ ಸ್ಪರ್ಧಿಸುವಂತೆ ಈಗಾಗಲೇ ಪಕ್ಷದ ವರಿಷ್ಠರು ಈಗಾಗಲೇ ಮೌಖಿಕ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

2013ರ  ಇಸವಿಯಲ್ಲಿ ಶಂಕರ್ ಬಿದರಿಯವರು ಕಾಂಗ್ರೆಸ್ ಪಕ್ಷದಿಂದ ಟೀಕೆಟ್ ಪಡೆದು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಸಹ ಕೇಳಿ ಬಂದಿದ್ದವು ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಅಲ್ಲಿಂದ ಹೊರ ಬಂದರು.

ತಮಗೆ ರಾಜಕೀಯ ಪುನರ್ ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದ ಕೊನೆಯದಾಗಿ ಸ್ಪರ್ಧಿಸಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವರುಣ ಕ್ಷೇತ್ರದಲ್ಲಿ ಲಿಂಗಾಯಿತ ಮತಗಳು ನಿರ್ಣಾಯಕವಾಗಿವೆ. ಶಂಕರ್ ಬಿದರಿ ಇದೇ ಸಮುದಾಯಕ್ಕೆ ಸೇರಿರುವುದರಿಂದ ಜೊತೆಗೆ ಈ ಭಾಗದಲ್ಲಿ ಅವರು ಹಿಂದೆ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುವ ಕಾರಣ ಜನರು ಕೈ ಹಿಡಿಯಬಹುದೆಂಬ ವಿಶ್ವಾಸ  ಬಿಜೆಪಿ ಪಕ್ಷದಲ್ಲಿದೆ.

ಈ ಹಿಂದೆ ಬಿದರಿ ಬಾಗಲಕೋಟೆ ಜಿಲ್ಲೆಯ ತೆರೆದಾಳ ಇಲ್ಲವೆ ವಿಜಾಪುರ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ಬಿಜೆಪಿ ವರುಣದಿಂದಲೇ ಅಖಾಡಕ್ಕಿಳಿಸಲು ಸಜ್ಜಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರ ಚುನಾವಣೆ ವೇಳೆಯಲ್ಲಿ ರಂಗೇರುವುದು ಸುಳ್ಳಲ್ಲ.

Like us on facebook

Leave a Reply

Your email address will not be published. Required fields are marked *

*

code

LATEST NEWS