ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ರಾಜೀವ್ ಗಾಂಧಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.
On the occasion of his birth anniversary, paying homage to former Prime Minister of India, Shri Rajiv Gandhi.
— Narendra Modi (@narendramodi) August 20, 2026
“ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ” ಎಂದು ಮೋದಿ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
